ವೀರಾಜಪೇಟೆ, ಮಾ. ೧೧: ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾನಂಗಡ ಅರುಣ್ ಅವರಿಗೆ ವೀರಾಜಪೇಟೆ ಕಚೇರಿ ಸಿಬ್ಬಂದಿಗಳಿAದ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ವೀರಾಜಪೇಟೆ ಹಾಗೂ ಪೊನ್ನಂಪೇಟೆ ಭೂಮಾಪನ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರನ್ನು ಕಚೇರಿಯಲ್ಲಿ ಸಿಬ್ಬಂದಿಗಳು ಬೀಳ್ಕೊಟ್ಟರು.

ಕಳೆದ ೩೫ ವರ್ಷಗಳಿಂದ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. ಇದೇ ಸಂದರ್ಭ ಬಾನಂಗಡ ಅರುಣ್ ದಂಪತಿಗಳಿಗೆ ಸನ್ಮಾನಿಸಲಾಯಿತು. ಈ ವೇಳೆ ತಾಲೂಕು ಕಚೇರಿ ಸಿಬ್ಬಂದಿಗಳು ಹಾಜರಿದ್ದರು.