ಮಡಿಕೇರಿ, ಮಾ. ೧೧: ರಾಜಾಸೀಟ್ ಬಳಿಯ ಕೂರ್ಗ್ ವಿಲೇಜ್ಗೆ ಸೂಕ್ತ ಕಾಯಕಲ್ಪ ನೀಡುವ ಸಂಬAಧ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಾಸೀಟ್ ಅಭಿವೃದ್ಧಿ ಸಂಬAಧ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ರಾಜಾಸೀಟ್ ಅಭಿವೃದ್ಧಿ ಸಮಿತಿ ಸದಸ್ಯರಾದ ಮೋಂತಿ ಗಣೇಶ್, ಅಂಬೆಕಲ್ಲು ನವೀನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಕೆ.ಟಿ.ಪ್ರಭು, ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಇತರರು ಪಾಲ್ಗೊಂಡು ಮಾಹಿತಿ ನೀಡಿದರು.
ಕೂರ್ಗ್ ವಿಲೇಜನ್ನು ಆಕರ್ಷಣೀಯಗೊಳಿಸಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ರಾಜಾಸೀಟ್ ಬಳಿ ಇರುವ ಟಿಕೆಟ್ ಕೌಂಟರನ್ನು ಕೂರ್ಗ್ ವಿಲೇಜ್ಗೆ ಸ್ಥಳಾಂತರಿಸಿದರೆ ಹೇಗೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಸಲಹೆ ನೀಡಿದರು. ಕೂರ್ಗ್ ವಿಲೇಜ್ನ್ನು ಅಭಿವೃದ್ಧಿಪಡಿಸಿ ಸ್ಥಳೀಯ ಸ್ವಸಹಾಯ ಗುಂಪುಗಳಿಗೆ ಅವಕಾಶ ಕಲ್ಪಿಸಲು ಉದ್ದೇಶವಾಗಿತ್ತು, ಆದರೆ ಯಾರೂ ಸಹ ಮುಂದೆ ಬರಲಿಲ್ಲ, ಆದ್ದರಿಂದ ಈಗಾಗಲೇ ಸ್ಥಳೀಯವಾಗಿ ವ್ಯಾಪಾರ ಮಾಡುತ್ತಿರುವವರಿಗೆ ಹಾಗೂ ಆಸಕ್ತರಿಗೆ ಬಾಡಿಗೆ ಆಧಾರದಲ್ಲಿ ಅವಕಾಶ ಮಾಡಲು ಮುಂದಾಗಿದ್ದೇವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಶಶಿಧರ್ ಮಾಹಿತಿ ನೀಡಿದರು.
ಮೋಂತಿ ಗಣೇಶ್ ಮಾತನಾಡಿ ಕೂರ್ಗ್ ವಿಲೇಜ್ನ್ನು ಅಭಿವೃದ್ಧಿ ಪಡಿಸವುದರ ಜೊತೆಗೆ ನಗರದ ನೆಹರು ಮಂಟಪಕ್ಕೆ ಇನ್ನಷ್ಟು ಕಾಯಕಲ್ಪ ಕಲ್ಪಿಸಬೇಕು. ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಟಿಕೆಟ್ ಕೌಂಟರ್ ನಿರ್ಮಾಣ ಹಾಗೂ ಮತ್ತಿತರ ಸೌಲಭ್ಯ ಸಂಬAಧ ಅಗತ್ಯ ಕ್ರಮವಹಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
ಮಾಹಿತಿ ಕೇಂದ್ರ, ಪ್ರವಾಸಿ ಮಿತ್ರ, ಆಹಾರ ಕೇಂದ್ರ, ಸಿಸಿಟಿವಿ ಕ್ಯಾಮರಾ ಅಳವಡಿಸುವುದು, ಸೋಲಾರ್ ಲೈಟ್ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಪುಟಾಣಿ ರೈಲು ನಿರ್ಮಾಣ, ಸೇರಿದಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ವಾಹನ ನಿಲುಗಡೆ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಕಾವೇರಿ ಕಲಾಕ್ಷೇತ್ರದಲ್ಲಿ ಕಾಮಗಾರಿ ನಿರ್ಮಾಣ ಸಂಬAಧ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಎಚ್.ಆರ್.ರಮೇಶ್, ಕಾವೇರಿ ಕಲಾಕ್ಷೇತ್ರದ ಸ್ಥಳದಲ್ಲಿ ಬಹುಮಹಡಿ ವ್ಯವಸ್ಥೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ಇರಲಿದೆ. ಮೂರನೇ ಮಹಡಿಯಲ್ಲಿ ಕಲಾಭವನ ಮಾದರಿಯಲ್ಲಿ ಸಭಾಂಗಣ ನಿರ್ಮಿಸಲಾಗುತ್ತಿದೆ ಎಂದರು. ಕಾವೇರಿ ಕಲಾಕ್ಷೇತ್ರದಲ್ಲಿ ನೂತನ ಕಟ್ಟಡ ನಿರ್ಮಾಣ ಸಂಬAಧ ತಾಂತ್ರಿಕ ಬಿಡ್ಡಿಗೆ ಅನುಮೋದನೆಯಾಗಿದ್ದು, ಆರ್ಥಿಕ ಬಿಡ್ಡು ಅನುಮೋದನೆಗಾಗಿ ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೌರಾಯುಕ್ತರು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪಣೀಂದ್ರ, ಸಹಾಯಕ ನಿರ್ದೇಶಕ ಬಿ.ಎಸ್.ಮುತ್ತಪ್ಪ, ಇತರರು ಇದ್ದರು.