ಸೋಮವಾರಪೇಟೆ, ಮಾ. ೧೭: ಸಮೀಪದ ಗೌಡಳ್ಳಿ ಹಿಂದೂ ಗೆಳೆಯರ ಬಳಗದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ೭ನೇ ವರ್ಷದ ಮುಕ್ತ ಹಿಂದೂ ಕಪ್ ಫುಟ್ಬಾಲ್ ಪಂದ್ಯಾವಳಿ ತಾ. ೧೯ರಿಂದ ನಡೆಯಲಿದೆ.
ಗೌಡಳ್ಳಿಯ ಬಿಜಿಎಸ್ ಶಾಲಾ ಮೈದಾನದಲ್ಲಿ ತಾ. ೧೯ ಮತ್ತು ೨೦ರಂದು ಪಂದ್ಯಾಟ ನಡೆಯಲಿದ್ದು, ವಿಜೇತ ತಂಡಕ್ಕೆ ರೂ. ೧.೫೦ ಲಕ್ಷ ನಗದು ಹಾಗೂ ಟ್ರೋಫಿ, ದ್ವಿತೀಯ ರೂ. ೧ ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಸಮಿತಿ ಅಧ್ಯಕ್ಷ ಕೆ.ಪಿ. ಆದರ್ಶ್ ತಿಳಿಸಿದ್ದಾರೆ.