ಮಡಿಕೇರಿ, ಮಾ. ೧೭: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಹಿಳಾ ದಿನ ಆಚರಣೆಯನ್ನು ಕಾಲೇಜಿನ ಐಕ್ಯೂಎಸಿ, ಮೇರಾ ಯುವ ಭಾರತ್ ಮತ್ತು ರೋಟರಿ ವುಡ್ಸ್ನ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಜಮೀರ್ ಅಹಮದ್ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, ಮಹಿಳಾ ದಿನಾಚರಣೆಯ ಇತಿಹಾಸ ಮತ್ತು ಅದರ ಬೆಳವಣಿಗೆ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಮಹಿಳೆಯರ ಸ್ಥಾನಮಾನ, ಸಾಮಾಜಿಕ ಸುಧಾರಕರಿಂದ ಮಹಿಳೆಯರ ಉನ್ನತೀಕರಣದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ನಿರ್ಮಲ ಅವರು ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿ ನಾಯಕಿ ಪ್ರೀಯ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ನ ಅಧ್ಯಕ್ಷ ಕಿರಣ್ ಕುಂದರ್, ರೋಟರಿ ವುಡ್ಸ್ನ ಪ್ರಮೀಳಾ ಕೆ. ಶೆಟ್ಟಿ, ರೋಟರಿ ವುಡ್ಸ್ನ ವಸಂತ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ರೇವತಿ ರಮೇಶ್, ಪ್ರೇಮ ನಿಂಗಪ್ಪ, ರಿಯಾಜ್ ಉದ್ದಿನ್, ಹಬೀಬ್ ಅಹಮದ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.