ಕಾಬುಲ್, ಮಾ. ೧೭: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಯುದ್ಧ ಮುಂದುವರೆದಿದ್ದು, ಉಭಯ ರಾಷ್ಟ್ರಗಳ ಗಡಿಗಳಲ್ಲಿ ಉದ್ವಿಗ್ವ ವಾತಾವರಣ ಮತ್ತಷ್ಟು ಹೆಚ್ಚಾಗಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಪರಸ್ಪರ ಭಾರೀ ಬಾಂಬ್ ದಾಳಿ ನಡೆಸುತ್ತಿವೆ. ಸೋಮವಾರ ರಾತ್ರಿ ಪಾಕಿಸ್ತಾನ ಅಫ್ಘಾನಿಸ್ತಾನದಲ್ಲಿ ದೊಡ್ಡ ಮಟ್ಟದ ವಾಯುದಾಳಿ ನಡೆಸಿದೆ. ಕಾಬೂಲ್‌ನ ಡ್ರಗ್ ಸೆಂಟರ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದು, ಕನಿಷ್ಟ ೪೦೦ ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ೨೫೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆAದು ತಿಳಿದುಬಂದಿದೆ.

ಅಫ್ಘಾನಿಸ್ತಾನ ಸರ್ಕಾರದ ವಕ್ತಾರ ಹಮ್ದಲ್ಲಾ ಫಿತ್ರಾತ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ರಾತ್ರಿ ೯ ಗಂಟೆಗೆ ನಡೆದ ಈ ದಾಳಿಯು ೨,೦೦೦ ಬೆಡ್ ಇರುವ ಆಸ್ಪತ್ರೆಯ ಪ್ರಮುಖ ವಿಭಾಗಗಳನ್ನು ನಾಶಮಾಡಿದ್ದು, ರಕ್ಷಣಾ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ತಿಳಿಸಿದ್ದಾರೆ

ಒಟ್ಟು ೨೩ ನಿಮಿಷಗಳಲ್ಲಿ ಕಾಬೂಲ್‌ನ ಐದು ಸ್ಥಳಗಳ ಮೇಲೆ ಪಾಕಿಸ್ತಾನಿ ಸೇನೆ ಬಾಂಬ್ ದಾಳಿ ನಡೆಸಿದೆ. ಆಸ್ಪತ್ರೆ ಸೇರಿದಂತೆ ವಸತಿ ಪ್ರದೇಶಗಳ ಅವಶೇಷಗಳಡಿ ಸಿಲುಕಿರುವವರನ್ನು ಮತ್ತು ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಮುಂದುವರಿದಿದೆ. ಈ ವೈಮಾನಿಕ ದಾಳಿಗೆ ಕೆಲವೇ ಗಂಟೆಗಳ ಮೊದಲು ಗಡಿಭಾಗದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಅಫ್ಘನ್ನರು ಸಾವನ್ನಪ್ಪಿದ್ದರು. ಫೆಬ್ರವರಿ ಅಂತ್ಯದಿAದಲೇ ಉಭಯ ರಾಷ್ಟ್ರಗಳ ನಡುವೆ ‘ಮುಕ್ತ ಯುದ್ಧ’ ಘೋಷಣೆಯಾದಂತಾಗಿದ್ದು, ಈಗ ಅದು ರಾಜಧಾನಿ ಕಾಬೂಲ್‌ಗೆ ವ್ಯಾಪಿಸಿದೆ. ಆಸ್ಪತ್ರೆಯ ಮೇಲಿನ ದಾಳಿಯಿಂದಾಗಿ ನೂರಾರು ಕುಟುಂಬಗಳು ಬೀದಿಪಾಲಾಗಿದ್ದು, ಅಂತಾರಾಷ್ಟಿçÃಯ ಸಮುದಾಯ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡುವಂತೆ ವಿಶ್ವಸಂಸ್ಥೆ ಮನವಿ ಮಾಡಿದೆ.

ಭಾರತದ ಖಂಡನೆ

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಓಮಿಡ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯನ್ನು “ಅನಾಗರಿಕ” ಮತ್ತು “ಹೇಡಿತನದ ಕೃತ್ಯ” ಎಂದು ಕರೆದ ಭಾರತದ ವಿದೇಶಾಂಗ ಸಚಿವಾಲಯವು ಪಾಕಿಸ್ತಾನವು “ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿದೆ.

ಪಾಕಿಸ್ತಾನ ಸಮರ್ಥನೆ

ಈ ನಡುವೆ ಆಫ್ಘಾನಿಸ್ತಾನ ಮಾಡಿರುವ ಆರೋಪವನ್ನು ಪಾಕಿಸ್ತಾನ ನಿರಾಕರಿಸಿದೆ. ಪಾಕಿಸ್ತಾನದ ಪ್ರಧಾನಮಂತ್ರಿ ಶಹ್ಬಾಜ್ ಶರೀಫ್ ಅವರು ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಕಾಬೂಲ್‌ನಲ್ಲಿ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರರ್ ಅವರು ಪ್ರತಿಕ್ರಿಯಿಸಿ, ಪಾಕಿಸ್ತಾನದ ಕಾಬೂಲ್ ಮತ್ತು ಪೂರ್ವ ಅಫ್ಘಾನಿಸ್ತಾನದ ನಂಗಾರ್ಹರ್ ಪ್ರಾಂತ್ಯದಲ್ಲಿ ಸೈನಿಕ ತಾಣಗಳನ್ನು ಗುರಿಯಾಗಿಸಿತು. ಸೈನಿಕ ಘಟಕಗಳು ಮತ್ತು ಶಸ್ತಾçಸ್ತç ಸಂಗ್ರಹಣಾ ತಾಣಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.