ಪೊನ್ನAಪೇಟೆ, ಮಾ. ೧೭: ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಕುಟ್ಟಿಚಾತ ಅಂಬಲದ ಬಳಿ ಇರುವ ವಿದ್ಯುತ್ ಟ್ರಾನ್ಸ್ಫಾರ್ಮರ್‌ಗೆ ಸಿಡಿಲು ಬಡಿದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಈ ಭಾಗದಲ್ಲಿ ಗುಡುಗು ಸಹಿತ ಮಳೆ ಸುರಿದ ಸಂದರ್ಭ ಈ ಘಟನೆ ಸಂಭವಿಸಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಘಟನೆ ಬಗ್ಗೆ ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ಚೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಡಿತಗೊಳಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಸದ್ಯಕ್ಕೆ ಮುಗುಟಗೇರಿ ಗ್ರಾಮದಲ್ಲಿ ವಿದ್ಯುತ್ ಕಡಿತಗೊಂಡಿದ್ದು, ತಾ. ೧ ರಂದು (ಇಂದು) ಸರಿಪಡಿಸಲಾಗುವುದು ಎಂದು ಚೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ.