ಸಿದ್ದಾಪುರ, ಮಾ. ೨೦: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲಾ ವಿದ್ಯಾರ್ಥಿನಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಲೈಂಗಿಕ ಕಿರುಕುಳ ನೀಡಿ ಬೆದರಿಸಿದ ಆಟೋ ಚಾಲಕ ಸಿದ್ದಾಪುರದ ಪಾಲಿಬೆಟ್ಟ ರಸ್ತೆ ನಿವಾಸಿ ಅನ್ಸಾರ್ ಕೆ.ಎಂ(೩೪) ಎಂಬಾತನನ್ನು ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ಸೇರಿದ ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಈ ಹಿಂದೆ ಹಲವಾರು ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.