ಮಡಿಕೇರಿ, ಮಾ. ೨೧: ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಇತ್ತೀಚೆಗೆ ನಿಧನರಾದ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಲಿಯಾಖತ್ ಆಲಿ ಅವರಿಗೆ ಸಂತಾಪ ಸೂಚಿಸಲಾಯಿತು.
ಮುಂದಿನ ನಗರಸಭಾ ಚುನಾವಣೆ ಮತ್ತು ನಗರ ಕಾಂಗ್ರೆಸ್ ಪಕ್ಷದ ಸಂಘಟನೆಯ ಬಲವರ್ಧನೆಗೆ ಶ್ರಮಿಸುವಂತೆ ಪ್ರಕಾಶ್ ಆಚಾರ್ಯ ಕರೆ ನೀಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ, ಪಕ್ಷದಲ್ಲಿ ಗುಂಪುಗಾರಿಕೆ ಮಾಡದೇ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕೆಂದು ಹೇಳಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ, ಪ್ರತೀ ವಾರ್ಡ್ಗಳಲ್ಲಿ ಬೂತ್ ಅಧ್ಯಕ್ಷರು, ಕಾರ್ಯಕರ್ತರು ಜನರ ಸಮಸ್ಯೆಗೆ ಸ್ಪಂದಿಸುವ ಮೂಲಕ ಜನರಿಗೆ ಹತ್ತಿರವಾಗಬೇಕು. ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷ ಸಂಘಟನೆ ಮಾಡಬೇಕೆಂದು ಸಲಹೆ ನೀಡಿದರು.
ಮುಂದಿನ ಚುನಾವಣೆ ಎದರಿಸಲು ಕಾಂಗ್ರೆಸ್ ಪ್ರಮುಖರ ಒಪ್ಪಿಗೆಯಂತೆ ಕೆಲವರಿಗೆ ಪಕ್ಷದ ಜವಾಬ್ದಾರಿ ನೀಡಲಾಯಿತು.
ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಿ.ಸಿ.ಜಗದೀಶ್, ಸದಾ ಮುದ್ದಪ್ಪ, ಸುದಯ್ ನಾಣಯ್ಯ, ಮುನೀರ್ ಮಾಚರ್, ಮೀನಾಜ್ ಪ್ರವೀಣ್, ಪ್ರಧಾನ ಕಾರ್ಯದರ್ಶಿಯಾಗಿ ಸಂಪತ್ ರಾಜ್, ಕೋಚನ ಚೇತನ್ ಮತ್ತು ನಗರ ಕಾಂಗ್ರೆಸ್ ಸಹ ಕಾರ್ಯದರ್ಶಿಯಾಗಿ ಹುಸೇನ್, ಕೆ.ಎ ಗಣೇಶ್ ನೇಮಕಗೊಂಡರು. ಗ್ಯಾಸ್ ಬೆಲೆ ಏರಿಕೆ ಖಂಡಿಸಿ ತಾ. ೨೩ ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಕಾಂಗ್ರೆಸ್ ಸೇವಾದÀಳ ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಫ್ಯಾನ್ಸಿ ಪಾರ್ವತಿ, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಡಿಕೇರಿ ತಾಲೂಕು ಅಲ್ಪಸಂಖ್ಯಾತರ ಘಟಕದ ಪ್ರಮುಖರಾದ ಕೆ.ಜಿ ಪೀಟರ್, ಪಕ್ಷದ ಪ್ರಮುಖರಾದ ಖಲೀಲ್ ಭಾಷ ಬಿ.ಎಸ್. ಪ್ರಕಾಶ್, ಆರ್.ಪಿ. ಚಂದ್ರಶೇಖರ್, ಕೌಸರ್ ಹಾಜರಿದ್ದರು.
ಪ್ರೇಮಾಕೃಷ್ಣ ಪ್ರಾರ್ಥಿಸಿ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಸ್ವಾಗತಿಸಿದರು.