ಸೋಮವಾರಪೇಟೆ, ಮಾ. ೨೧: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಮೊದಲ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತು ಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಸೋಮವಾರಪೇಟೆಯ ವೀರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು
ಇಲ್ಲಿನ ಎಸ್.ಜೆ.ಎಂ.ಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಸಾಮಗ್ರಿ ಮತ್ತು ಪ್ರವೇಶ ಪತ್ರ ವಿತರಣಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಶಿಕ್ಷಕರು ಮಾಡುವ ಪಾಠವನ್ನು ವಿದ್ಯಾರ್ಥಿಗಳು ಗಮನದಿಂದ ಕೇಳಬೇಕು. ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು. ರಾಣಿ ರವೀಂದ್ರ ನಿರೂಪಿಸಿ, ಶಿವಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಹೆಚ್. ಮಾರಪ್ಪ, ಧನ್ಯ ಸುನಿಲ್, ಪೃಥ್ವಿ, ಪ್ರಕಾಶ್, ನೇತ್ರಾವತಿ, ಇದ್ದರು.