ಮಡಿಕೇರಿ, ಮಾ.೨೩: ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟ(ಓಡಿ.ಪಿ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತಾ.೨೪ ರಂದು (ಇಂದು) ಬೆಳಿಗ್ಗೆ ೧೦:೩೦ ಗಂಟೆಗೆ ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುರೇಂದ್ರ ಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ವೀರಭದ್ರಯ್ಯ ಅವರು ಉಪಸ್ಥಿತ ರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆÀಯನ್ನು ಮೈಸೂರು ಒ.ಡಿ.ಪಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಫಾದರ್ ಜಾನ್ ಫರ್ನಾಂಡಿಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಬಿಂದುಮಣಿ, ಅಪರ ಜಿಲ್ಲಾಧಿಕಾರಿ ಐಶ್ವರ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಸನ್ನ ಕುಮಾರ್, ನಗರಸಭೆ ಅಧ್ಯಕ್ಷೆ ಕಲಾವತಿ, ಒ.ಡಿಪಿ ಸಂಯೋಜಕರಾದ ಮೋಲಿ ಪೊಡ್ತಾವೋ ಹಾಗೂ ಇತರರು ಭಾಗವಹಿಸಲಿದ್ದಾರೆ.