ಮಡಿಕೇರಿ, ಮಾ. ೨೩: ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ತಾ. ೨೫ ರಿಂದ ೨೭ ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ ೨೦೨೬ ನಡೆಯಲಿದೆ.
ಈ ಬೃಹತ್ ಕಾರ್ಯಕ್ರಮವನ್ನು ರೀಡ್ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಪದವೀದರರು ಮತ್ತು ತರಬೇತಿ ಪಡೆದ ಶಿಕ್ಷಕರು (ಬಿ.ಇಡಿ, ಡಿ.ಇಡಿ, ಎಂ.ಇಡಿ, ಬಿ.ಪಿಇಡಿ, ಎಂಪಿ.ಇಡಿ) ಅನುಭವ ಹೊಂದಿದ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಉದ್ಯೋಗ ಹುಡುಕುವವರಿಗೆ ಸ್ಥಳದಲ್ಲಿಯೇ ನೋಂದಣಿ ಮತ್ತು ಸಂದರ್ಶನದ ಅವಕಾಶ ಇರಲಿದೆ. ಬೆಂಗಳೂರು ಮತ್ತು ಮೈಸೂರಿನ ೧೨ ಪರಿಣಿತ ತರಬೇತುದಾರರಿಂದ, ೧೨ ವಿವಿಧ ವಿಷಯಗಳ ಮೇಲೆ ಒಟ್ಟು ೩೦ ವಿಶೇಷ ತರಬೇತಿ ಕಾರ್ಯಾಗಾರ ನಡೆಯಲಿದೆ. ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.೬೩೬೪೫೫೮೩೮೩ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.