ಮಡಿಕೇರಿ, ಮಾ. ೨೩ : ಮಡಿಕೇರಿ ತಾಲೂಕಿನ ಹಾಕತ್ತೂರು ಗ್ರಾಮದ ಸಾಮಾಜಿಕ ಸೇವಾ ಸಂಸ್ಥೆ "ಯುವ ಸ್ಪಂದನ ಯೂತ್ ಫೌಂಡೇಶನ್"ನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಸುನಿಲ್ ಕುಮಾರ್ ಕೆ.ಎಸ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘಟನೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಮಿಲನ್ ಪೂಜಾರಿ ಬಿ.ಎಸ್ ಹಾಗೂ ಉಪಾಧ್ಯಕ್ಷರಾಗಿ ಪೊನ್ನಪ್ಪ (ಅಣ್ಣು) ಆಯ್ಕೆಯಾದರು.
ನೂತನ ಅಧ್ಯಕ್ಷ ಸುನಿಲ್ ಕುಮಾರ್ ಕೆ.ಎಸ್ ಮಾತನಾಡಿ ನೂತನವಾಗಿ ಆಯ್ಕೆಯಾದ ಉತ್ಸಾಹಿ ಯುವ ಪದಾಧಿಕಾರಿಗಳ ತಂಡವು ಮುಂಬರುವ ದಿನಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಜನಪರ ಕಾರ್ಯಗಳನ್ನು ಹಮ್ಮಿಕೊಳ್ಳುವ ದೃಢ ಸಂಕಲ್ಪ ಹೊಂದಿದೆ ಎಂದರು.