ಮಡಿಕೇರಿ, ಮಾ. ೨೩ : ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯನ್ನು ೨೦೨೫-೨೬ ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿಯು ಈಗಾಗಲೇ ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೊಂದಣಿಗೆ ಮಾರ್ಚ್ ೩೧ ರ ವರೆಗೆ ಅವಕಾಶವಿದೆ.
ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು/ ಸಹಕಾರ ಬ್ಯಾಂಕುಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದೆ. (ಷರತ್ತುಗಳು ಅನ್ವಯ)
ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು. ಅರ್ಜಿ ನಮೂನೆ, ರೇಷನ್ ಕಾರ್ಡ್/ ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ ೨ ಪೋಟೋ. ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬAಧಿಸಿದAತೆ ಗರಿಷ್ಟ ೦೪ ಸದಸ್ಯರ ಕುಟುಂಬ ಒಂದಕ್ಕೆ ರೂ ೫೦೦ ಗಳ ವಂತಿಕೆ ಹಾಗೂ ೦೪ ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ ೧೦೦ ಗಳನ್ನು ಪಾವತಿಸಬೇಕು.
ನಗರ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬAಧಿಸಿದAತೆ ಗರಿಷ್ಟ ೦೪ ಸದಸ್ಯರ ಕುಟುಂಬ ಒಂದಕ್ಕೆ ರೂ ೧೦೦೦ ಗಳ ವಂತಿಕೆ ಹಾಗೂ ೦೪ ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ ೨೦೦ ಗಳನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉಚಿತ (ಆರ್.ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರ ಅನ್ವಯವಾಗುತ್ತದೆ). ಅರ್ಜಿ ಸಲ್ಲಿಸಲು ಮಾರ್ಚ್ ೩೧ ಕೊನೆ ದಿನವಾಗಿದೆ. ಕುಟುಂಬದ ಒಬ್ಬ ವ್ಯಕ್ತಿ ಸಂಬAದಪಟ್ಟ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು ೦೧ ತಿಂಗಳು ಗತಿಸಿದಲ್ಲಿ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಹಾಗೂ ನೋಂದಾಯಿತ ಸದಸ್ಯರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ .೫ ಲಕ್ಷದ ವರೆಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಚೇತನ್ ಬಿ.ಎಸ್. ಯಶಸ್ವಿನಿ ಜಿಲ್ಲಾ ಸಂಯೋಜಕರು ಕೊಡಗು ಜಿಲ್ಲೆ, ಮೊಬೈಲ್ ಸಂಖ್ಯೆ ೯೫೯೧೪೬೯೪೯೭ ಮತ್ತು ೮೯೭೦೮೨೪೯೮೭ ಇವರನ್ನು ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ರವಿಕುಮಾರ್ ಅವರು ತಿಳಿಸಿದ್ದಾರೆ.