ವೀರಾಜಪೇಟೆ, ಮಾ. ೨೩: ವೀರಾಜಪೇಟೆಯಲ್ಲಿ ಪ್ರಥಮ ಬಾರಿಗೆ ಏಪ್ರಿಲ್ ೨ ರಂದು ಅದ್ದೂರಿ ಹನುಮ ಜಯಂತಿ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಈ ಸಂಬAಧ ವೀರಾಜಪೇಟೆ ನಗರದಲ್ಲಿ ಅದ್ದೂರಿ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹನುಮ ಜಯಂತಿ ಆಯೋಜನಾ ಸಮಿತಿಯ ಅಧ್ಯಕ್ಷ ಅಂಜಪರವAಡ ಅನಿಲ್ ಮಂದಣ್ಣ ತಿಳಿಸಿದ್ದಾರೆ.

ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಹಾಗೂ ಖ್ಯಾತ ವಾಗ್ಮಿಗಳಾದ ಶರಣ್ ಪಂಪ್‌ವೆಲ್ ಆಗಮಿಸಲಿದ್ದಾರೆ.

ಏ. ೨ ರಂದು ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಬಾಲಾಂಜನೇಯ ದೇವಾಲಯದಿಂದ ಉತ್ಸವ ಮೂರ್ತಿಯೊಂದಿಗೆ ಶೋಭಾಯಾತ್ರೆ ಪ್ರಾರಂಭವಾಗಲಿದೆ. ಅಲ್ಲಿಂದ ಚಿಕ್ಕಪೇಟೆಯ ವೀರಾಂಜನೇಯ ದೇವಾಲಯಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ಬಳಿಕ ಅಲ್ಲಿಂದ ಶೋಭಾಯಾತ್ರೆ ಚರ್ಚ್ ಸ್ಟಿçÃಟ್ ಮೂಲಕ ಬಂದು ಮಾರಿಯಮ್ಮ ದೇವಾಲಯದ ಬಳಿ ಸಂಗಮವಾಗಲಿದೆ. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಟ್ಟಣದ ಮುಖ್ಯ ಬೀದಿಯಲ್ಲಿ ಸಂಚರಿಸಿ ತಾಲೂಕು ಮೈದಾನದಲ್ಲಿ ಕೊನೆಗೊಳ್ಳಲಿದೆ. ತಾಲೂಕು ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಶೋಭಾಯಾತ್ರೆಯಲ್ಲಿ ಕೊಡಗಿನ ವಾದ್ಯ, ವಿವಿಧ ಸ್ತಭ್ದಚಿತ್ರಗಳು, ಬೆಳ್ಳಿ ರಥದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ, ಭಜನೆ ಕುಣಿತ, ಚಂಡೆಮೇಳ, ಸೇರಿದಂತೆ ಹುಲಿವೇಷದ ನರ್ತನ ಪ್ರದರ್ಶ£ಗೊಳ್ಳಲಿವೆ. ಕಾರ್ಯಕ್ರಮದ ಬಳಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.