ನಾಪೋಕ್ಲು, ಮಾ. ೨೩: ಸಮೀಪದ ಕಕ್ಕಬ್ಬೆಯ ಯವಕಪಾಡಿ ಗ್ರಾಮದ ನೆಟ್ಟುಮಾಡು ಭಗವತಿ ದೇವಿಯ ಬ್ರಹ್ಮ ಕಲಶ ಮತ್ತು ಪುನರ್ ಪ್ರತಿಷ್ಠಾಪನೆ ಕಾರ್ಯ ತಾ. ೨೨ ರಿಂದ ಆರಂಭಗೊAಡಿದ್ದು, ತಾ. ೨೫ ರವರೆಗೆ ನಡೆಯಲಿದೆ.
ನೆಟ್ಟುಮಾಡು ಭಗವತಿ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಬಿಂಬ ಪುನರ್ ಪ್ರತಿಷ್ಠೆ, ಅಷ್ಟಬಂಧ ಲೇಪನ, ಬ್ರಹ್ಮ ಕಲಶ ಕಾರ್ಯಕ್ರಮವು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಕೂಡುಕಟ್ಟಿನ ಯಜಮಾನತ್ವದಲ್ಲಿ ಜರುಗಲಿದೆ. ಇದರ ಅಂಗವಾಗಿ ತಾ. ೨೩ರಂದು ಬೆಳಿಗ್ಗೆ ಗಣಪತಿ ಹೋಮ, ಬಿಂಬಶುದ್ದಿ, ಕಲಶಾಭಿಷೇಕ, ಶಾಂತಿ ಹೋಮ, ಪ್ರಾಯಶ್ಚಿತ ಹೋಮಗಳು, ಸಂಜೆ ದುರ್ಗಾ ನಮಸ್ಕಾರ ಪೂಜೆ ನಡೆಯಿತು. ತಾ. ೨೪ ರಂದು ಬೆಳಿಗ್ಗೆ ಗಣಪತಿ ಹೋಮ, ಸಂಹಾರ ತತ್ವ ಹೋಮ, ಸಂಹಾರ ತತ್ವ ಕಲಶ ಪೂಜೆ, ಸಂಹಾರ ತತ್ವ ಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ಅನುಜ್ಞಾ ಪ್ರಾರ್ಥನೆ, ದೇವ ಕಲಶ ಪೂಜೆ, ಜೀವದ್ವಾಪನೆ, ಜೀವ ಕಲಶ ನೆರವೇರಲಿದೆ.
ಸಂಜೆ ಕುಂಬೇಶ ಕರ್ಕರಿ ಕಲಶ ಪೂಜೆ, ಆದಿ ವಾಸ ಹೋಮ, ಧ್ಯಾನ ದಿವಸ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ ನೆರವೇರಲಿದೆ. ತಾ. ೨೫ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರಸಾದ ಪ್ರತಿಷ್ಠೆ ಪೀಠ ಪ್ರತಿಷ್ಠೆ ನಡೆಯಲಿದೆ. ಬೆಳಿಗ್ಗೆ ೧೦:೨೧ ರಿಂದ ೧೧:೩೦ರ ವೃಷಭ ಲಗ್ನದಲ್ಲಿ ಅಮ್ಮನವರ ಬಿಂಬ ಪ್ರತಿಷ್ಠೆ ಜೀವ ಕಲಶ ಅಭಿಷೇಕ, ಶಿಖರ ಪ್ರತಿಷ್ಠೆ, ಪರಿವಾರ ಪ್ರತಿಷ್ಠೆ ನಡೆಯಲಿದ್ದು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಮಂತ್ರಾಕ್ಷತೆ ನಡೆಯಲಿದೆ.