ಮಡಿಕೇರಿ ಮಾ.೨೪: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸಹಯೋಗದಲ್ಲಿ ರಾಜ್ಯ ಮಟ್ಟದ ಅರೆಭಾಷೆ ವಿಚಾರ ಸಂಕಿರಣ ಮತ್ತು ಪದ ಕಟ್ಟುವ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ತಾ.೨೬ ರಂದು(ನಾಳೆ) ಬೆಳಗ್ಗೆ ೧೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರು ಮತ್ತು ಸಮಾಜ ಸೇವಕರಾದ ಚಂಡೀರ ಕೆ.ಬಸಪ್ಪ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್ ರಾಘವ ಬಿ., ಬರಹಗಾರರಾದ ಸುಶೀಲಾ ಕುಶಾಲಪ್ಪ ಅಂಬೆಕಲ್ಲು ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಗ್ಗೆ ೧೧ ಗಂಟೆಗೆ ವಿಚಾರಗೋಷ್ಠಿ ನಡೆಯಲಿದೆ. ಮೈಸೂರು ಯುವರಾಜ ಕಾಲೇಜು ಮತ್ತು ಮಹಾರಾಜ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ.ಚೆರಿಯಮನೆ ಬೆಳ್ಯಪ್ಪ ರಾಮಚಂದ್ರ ಹಾಗೂ ಮೈಸೂರು ಶೇಷಾದ್ರಿಪುರಂ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಲಾವಣ್ಯ ಸಿ.ಪಿ. ಅವರು ಉಪನ್ಯಾಸ ನೀಡಲಿದ್ದಾರೆ.

ಮಧ್ಯಾಹ್ನ ೧ ಗಂಟೆಗೆ ೨೦೨೫ನೇ ಸಾಲಿನ ಅರೆಭಾಷೆ ಕತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ. ಮಧ್ಯಾಹ್ನ ೨ ಗಂಟೆಯಿAದ ಪದ ಕಟ್ಟುವ ಕಾರ್ಯಾಗಾರ ನಡೆಯಲಿದೆ. ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಸಂಜೀವ ಕುದ್ಪಾಜೆ, ಸಾಹಿತಿ ಮತ್ತು ಕವಿಯತ್ರಿ ಲೀಲಾವತಿ ದಾಮೋದರ ಕುಂದಲ್ಪಾಡಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.