ನಾಪೋಕ್ಲು, ಮಾ. ೨೪: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿ ತಾಲೂಕು ಸಮ್ಮೇಳನವನ್ನು ಕಡಂಗದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬAಧ ತಾ. ೨೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕಡಂಗ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಪಾಲ್ಗೊಳ್ಳಲಿದ್ದಾರೆ ಎಂದು ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೆರವಂಡ ಉಮೇಶ್ ಕೋರಿದ್ದಾರೆ.