ಕೂಡಿಗೆ, ಮಾ. ೨೪: ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಂಘ ಹಕ್ಕೆ ಹಾಗೂ ನವಚೇತನ ಯುವಕ ಸಂಘ ಕಣಿವೆ, ಇವರ ಸಹಯೋಗದೊಂದಿಗೆ ಮುಕ್ತ ಕಬಡ್ಡಿ ಪಂದ್ಯಾವಳಿ (ಮ್ಯಾಟ್ ಪಂದ್ಯಾಟ)ವು ತಾ. ೨೮, ೨೯ ರಂದು ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಮೈದಾನದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಯೋಜಕ, ಉದ್ಯಮಿ ಮೋಹನ್ ಕುಮಾರ್ ತಿಳಿಸಿದ್ದಾರೆ.