ಕಣಿವೆ, ಮಾ. ೨೫: ಬೆಂಗಳೂರಿನ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕೊಡಗು ವಿಶ್ವವಿದ್ಯಾನಿಲಯ ವತಿಯಿಂದ ವಿವಿಯ ಸಭಾಂಗಣದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ತಾ. ೨೭ ರಂದು ವಿಶೇಷ ಉಪನ್ಯಾಸ ಹಾಗೂ ರಂಗ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ೧೦.೩೦ ಕ್ಕೆ ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಆಲೂರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೈಸೂರಿನ ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿವಿ ಕುಲಸಚಿವ ಡಾ.ಎಂ.ಸುರೇಶ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಡಾ. ಜಾಹಿದಾ ಕೊಡಗು, ಕೊಡಗು ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಆವರ್ತಿ ಆರ್. ಮಹದೇವಪ್ಪ ಉಪಸ್ಥಿತರಿರಲಿದ್ದಾರೆ. ನೀನಾಸಂ ರಂಗ ನಿರ್ದೇಶಕ ಮಂಜಪ್ಪ ಮಾಲ್ದಾರೆ ಅವರಿಂದ ರಂಗಭೂಮಿ ಎಂಬ ಚಿಕಿತ್ಸಕ ಮಾದರಿ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕುಹೂ ಬೆಂಗಳೂರು ತಂಡದವರಿAದ ರಂಗ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕಿ ಡಾ. ಜಾಹಿದಾ ಕೊಡಗು ತಿಳಿಸಿದ್ದಾರೆ.