ಕೂಡಿಗೆ, ಮಾ. ೨೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜೋತ್ಸವದ ಅಂಗವಾಗಿ ತಾ. ೩೦ ರಂದು (ಇಂದು) ಮೃತ್ಯುಂಜಯ ಹೋಮ ನಡೆಯಲಿದೆ.

ಶ್ರೀ ಸ್ವಾಮಿಗೆ ವಿಶೇಷ ಪೂಜೆ, ಗಣಪತಿ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ದೇವತೆಗಳಿಗೆ ವಿಶೇಷ ಪೂಜೆ, ಅಭಿಷೇಕ, ಅರ್ಚನೆ ಇತ್ಯಾದಿ ಪೂಜೆಗಳು ನಡೆದ ನಂತರ ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.