ಮಡಿಕೇರಿ, ಮಾ. ೨೯: ಕೇರಳ ಚುನಾವಣಾ ಪ್ರಚಾರದ ಜವಾಬ್ದಾರಿ ನಡುವೆ, ಇಂದು ಕ್ಷೇತ್ರಕ್ಕೆ ಆಗಮಿಸಿದ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು. ಕುಟ್ಟ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಗಮನಿಸಿದ ಶಾಸಕರು, ಅಲ್ಲಿಂದಲೇ ಉನ್ನತ ವೈದ್ಯಾಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ಮಾಜಿ ವಲಯ ಅಧ್ಯಕ್ಷ ಮುಕ್ಕಾಟಿರ ನವೀನ್, ಶ್ರೀಮಂಗಲ ವಲಯ ಅಧ್ಯಕ್ಷ ಪಲ್ವಿನ್, ತಿತೀರ ಮಂದಣ್ಣ, ಡಿಸಿಸಿ ಸದಸ್ಯರಾದ ಪೆಮ್ಮಂಡ ರಾಜ, ಮಚ್ಚಮಾಡ ಮನು, ಸಿದ್ದು ನಾಚಪ್ಪ, ಯುವ ಕಾಂಗ್ರೆಸ್‌ನ ಫಾರ್ದಿನ್, ಅಶ್ರಫ್, ಮಜೀದ್ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು.