ಮುಳ್ಳೂರು, ಮಾ. ೩೧: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ್ತು ಪ್ರಸ್ತುತ ಸಮಾಜ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಪತ್ರಿಕಾ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪತ್ರಕರ್ತ ಸುರೇಶ್ ಚೆರಿಯಮನೆ ಅಭಿಪ್ರಾಯಪಟ್ಟರು.
ಅವರು ಸಮೀಪದ ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಾರ್ಷಿಕ ಶಿಬಿರದಲ್ಲಿ ‘ಪ್ರಸ್ತುತ ಸಮಾಜದಲ್ಲಿ ಪತ್ರಿಕಾ ಮಾಧ್ಯಮಗಳ ಪಾತ್ರ’ ಎಂಬ ವಿಷಯದ ಕುರಿತು ಮಾತನಾಡಿದರು. ಶತಮಾನಗಳ ಹಿಂದೆಯೇ ಸಮಾಜದಲ್ಲಿನ ಆಗು-ಹೋಗುಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಹಸ್ತಾಕ್ಷರದ ಪತ್ರಿಕೆ ಪ್ರಾರಂಭಗೊಳ್ಳಲು ನಾಂದಿಯಾಯ್ತು. ಸಮಾಜ ಬದಲಾದಂತೆ ಪತ್ರಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೆ ಅಂಗವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಸಮಾಜದಲ್ಲಿ ಅಕ್ಷರ, ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣಗಳು ಸಮೂಹ ಮಾಧ್ಯಮಗಳಾಗಿ ಸ್ವರೂಪ ಪಡೆಯುತ್ತಿವೆ ಎಂದರು.
ಇಂದು ಸಾಮಾಜಿಕ ಜಾಲತಾಣಗಳು ಎಐ ಅಂತಹ ತ್ರಂತ್ರಜ್ಞಾನದ ಮೂಲಕ ಕೃತಕ ದೃಶ್ಯಗಳನ್ನು ಸೃಷ್ಟಿಸುತ್ತಿರುವುದು ಮಾಧ್ಯಮ ಕ್ಷೇತ್ರಕ್ಕೆ ಮಾರಕವಾಗಿದೆ. ಇವುಗಳಿಂದ ಸಮಾಜದಲ್ಲಿ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಬೇಸರ ವ್ಯಕ್ತ ಪಡಿಸಿದರು. ಇಂದು ಅಕ್ಷರ ಮಾಧ್ಯಮ ಶಕ್ತಿಯುತ ಮಾಧ್ಯಮವಾಗಿದ್ದರೂ ಸಹ ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಜನರು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಜೆ.ಪಿ ಕವಿತ, ವಿದ್ಯಾರ್ಥಿಗಳಲ್ಲಿ ಚೈತನ್ಯ ಹುರುಪುಗಳಿದ್ದರೆ ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ.
ರಾಷ್ಟಿçÃಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಹರೀಶ್ ಕುಮಾರ್ ಮಾಗಲು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷ ಮದನ್, ಸದಸ್ಯರಾದ ಶಶಿಕಲಾ, ಅಶ್ವಿತ, ಉಪನ್ಯಾಸಕ ಡಿ.ಇ ಸುರೇಂದ್ರ, ಬಿ.ಎಂ ಪೊನ್ನಪ್ಪ, ಪತ್ರಕರ್ತ ದಿನೇಶ್ ಮಾಲಂಬಿ ಮುಂತಾದವರು ಹಾಜರಿದ್ದರು