ಮಡಿಕೇರಿ, ಮಾ. ೩೧: ನಾಪೋಕ್ಲು ಸಮೀಪದ ಎಮ್ಮೆಮಾಡುವಿನಲ್ಲಿ ಕೆಲದಿನಗಳ ಹಿಂದೆ ಅನ್ಯಕೋಮಿನ ಮದುವೆ ಸಮಾರಂಭದಲ್ಲಿ ಮಧುಮಗ ತುಳುನಾಡಿನ ದೈವಕೋಲದ ವೇಷ ಧರಿಸಿ, ಅವಹೇಳನ ಮಾಡಿರುವುದಾಗಿ ಆರೋಪಿಸಿ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ಆತನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಡಿವೈಎಸ್‌ಪಿ ಸೂರಜ್ ಅವರ ಮೂಲಕ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಈ ಸಂದರ್ಭ ಸಂಘದ ಅಧ್ಯಕ್ಷ ಸದಾಶಿವ ರೈ, ಸಂಘಟನಾ ಕಾರ್ಯದರ್ಶಿ ಪಿ.ಎಂ. ರವಿ, ಪ್ರಕಾಶ್ ಆಚಾರ್ಯ ಇದ್ದರು.
ಹಿಂಜಾವೇ ಖಂಡನೆ
ದೈವಕ್ಕೆ ಅವಮಾನ ಮಾಡಿದ ಘಟನೆಗೆ ಸಂಬAಧಿಸಿದAತೆ ಹಿಂದೂ ಜಾಗರಣಾ ವೇದಿಕೆ ಖಂಡನೆ ವ್ಯಕ್ತಪಡಿಸಿದ್ದು, ದುಷ್ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ ಬೋಜೇಗೌಡ ಒತ್ತಾಯಿಸಿದ್ದಾರೆ.
ಇದೇ ಘಟನೆಗೆ ಸಂಬAಧಿಸಿದAತೆ ಖಂಡನೆ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸಂತೋಷ್, ಈ ಕೃತ್ಯವೆಸಗಿದ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.