ಪೊನ್ನಂಪೇಟೆ, ಏ. ೧: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ, ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪುಗ್ಗೆರ ದಿನೇಶ್ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕಾದರೆ ವಿದ್ಯಾರ್ಥಿಗಳು ಶೈಕ್ಷಣಿಕ ಜ್ಞಾನದ ಜೊತೆಗೆ ಉತ್ತಮ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನ, ಶ್ರದ್ಧೆ, ತಾಳ್ಮೆ, ಗುರಿ, ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಸಾಧಿಸಲು ಸಾಧ್ಯ. ಪೋಷಕರು ತಮ್ಮ ಮಕ್ಕಳ ಆಸಕ್ತಿಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕು ಎಂದರು.

ಪ್ರಾAಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಕಾಲೇಜು ವರದಿ ವಾಚಿಸಿದರು. ಈ ಸಂದರ್ಭ ಪ್ರಸ್ತುತ ವರ್ಷ ಪಿ.ಹೆಚ್.ಡಿ ಪದವಿ ಪಡೆದ ಡಾ. ಕಾವ್ಯ ಸಿ.ಟಿ., ಡಾ. ಮಾರಣ್ಣ ಟಿ., ಸಂತೋಷ್ ಹೆಚ್.ಎಸ್. ಹಾಗೂ ಕಳೆದ ೫೭ ವರ್ಷಗಳಿಂದ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪೊನ್ನಂಪೇಟೆಯ ಹಿರಿಯ ಛಾಯಾಗ್ರಾಹಕ ಎಸ್.ಎಲ್. ಶಿವಣ್ಣ ಅವರನ್ನು ಸನ್ಮಾನಿಸಲಾಯಿತು.

ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಕೆ.ಕೆ. ಚಿತ್ರಾವತಿ, ಡಾ. ಪಿ.ಪಿ. ಸವಿತಾ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಶಾರದ ಟಿ.ಎನ್., ಅಭಿಷೇಕ್ ಬಿ.ಎನ್., ಆಶಿತ ಪಿ.ಯು., ಚಂಗಪ್ಪ ಜಿ.ಟಿ., ಡಯಾನ ಕೆ.ಎಂ., ಲೆವಿನ್ ಎಂ.ಕೆ., ಕೃತಿ ಕಾವೇರಮ್ಮ ಕೆ.ಎ., ಆಡಳಿತ ಮಂಡಳಿ ನಿರ್ದೇಶಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.