ಮಡಿಕೇರಿ, ಏ.೧: ರಾಷ್ಟಿçÃಯ ಹೆದ್ದಾರಿ-೨೭೫ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದು,್ದ ಈ ಸಂಬAಧ ಕುಶಾಲನಗರ-ಬಸವನಹಳ್ಳಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ - ರಾಷ್ಟಿçÃಯ ಹೆದ್ದಾರಿ-೨೭೫ (ಮೈಸೂರು-ಮಡಿಕೇರಿ ವಿಭಾಗ)ಕೋರಿದೆ.
ಕುಶಾಲನಗರ ವಲಯ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಖಾಸಗಿ ಮತ್ತು ಸರ್ಕಾರಿ ಜಾಗದಲ್ಲಿ ಕಾಮಗಾರಿಗೆ ಅಡಚಣೆಯಾದ ೧೯೯ ಬೀಟೆ ಮತ್ತು ಇತರೆ ಜಾತಿಯ ಮರಗಳನ್ನು ಕಡಿದು ಸರ್ಕಾರಿ ನಾಟಾ ಸಂಗ್ರಹಾಲಯಕ್ಕೆ ಸಾಗಿಸಲು ಹಾಗೂ ಮೆದು ಜಾತಿಯ ಮರಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಕುಶಾಲನಗರ ವಲಯ ಅರಣ್ಯಾಧಿಕಾರಿ ಹಾಗೂ ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವರದಿ ಸಲ್ಲಿಸಿದ್ದಾರೆ.
ಆದ್ದರಿಂದ, ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಏಪ್ರಿಲ್ ೧೫ ರ ಒಳಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ-ಮಡಿಕೇರಿ ವಿಭಾಗ, ಮಡಿಕೇರಿ ಇವರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬೇಕಾಗಿ ಈ ಮೂಲಕ ತಿಳಿಸಲಾಗಿದೆೆ.
ನಿಗಧಿತ ಅವಧಿಯಲ್ಲಿ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.