ಕೂಡಿಗೆ, ಏ. ೧: ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ಮತ್ತು ಜಾತ್ರೋತ್ಸವ ಅಂಗವಾಗಿ ವರ್ಷಂಪ್ರತಿಯAತೆ ನೀಡುವ ರಾಮಲಿಂಗೇಶ್ವರ ಕಣಿವೆ ಶ್ರೀ ಪ್ರಶಸ್ತಿಯನ್ನು ಈ ಸಾಲಿನಲ್ಲಿ ಕುಶಾಲನಗರದ ಟಿ.ಆರ್. ಶರವಣಕುಮಾರ್ ಅವರಿಗೆ ಸಮಿತಿಯ ವತಿಯಿಂದ ನೀಡಿ ಗೌರವಿಸಲಾಯಿತು.

ಟಿ.ಆರ್. ಶರವಣಕುಮಾರ್ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೀಡಿ ಗೌರವಿಸಿದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ಸಮಾಜ ಸೇವಕರಾದ ಹಕ್ಕೆ ಮೋಹನ್, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್. ಅಶೋಕ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಅನಂತ, ವೆಂಕಟೇಶ್, ಶಿವನಂಜಪ್ಪ, ಸಹಕಾರ ಯೂನಿಯನ್ ಬ್ಯಾಂಕ್ ನಿರ್ದೇಶಕ ಆರ್.ಎಸ್. ಸುನಿಲ್ ರಾವ್ ಸೇರಿದಂತೆ ಸಮಿತಿ ಸದಸ್ಯರು, ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.