ಮುಳ್ಳೂರು, ಮೇ ೪: ಸಮೀಪದ ಶನಿವಾರಸಂತೆಯ ನೂತನ ಒಕ್ಕಲಿಗರ ಸಂಘದ ಉದ್ಘಾಟನೆ ಮತ್ತು ಸಂಘದ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಸಮಾರಂಭ ತಾ. ೫ ರಂದು (ಇಂದು) ಬೆಳಿಗ್ಗೆ ೧೦-೩೦ ಗಂಟೆಗೆ ಪಟ್ಟಣದ ಯಶಸ್ವಿನಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಹಾಸನ ಮತ್ತು ಕೊಡಗು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ಆರ್.ಕೇಶವೇಗೌಡ ಅಧ್ಯಕ್ಷತೆ ವಹಿಸಲಿದ್ದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.