ವೀರಾಜಪೇಟೆ, ಮೇ ೪: ವೀರಾಜಪೇಟೆಯ ಆರ್ಜಿ ಗ್ರಾಮದ ಪೆರುಂಬಾಡಿಯಲ್ಲಿ ರೂ. ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ, ಚರಂಡಿ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಉದ್ಘಾಟಿಸಿದರು.
ಈ ಸಂದರ್ಭ ಕಾಂಗ್ರೆಸ್ ವಲಯ ಅಧ್ಯಕ್ಷ ವರ್ಗೀಸ್, ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಬ್ಲಾಕ್ ಮಹಿಳಾ ಅಧ್ಯಕ್ಷೆ ಕಾಳಮಾಡ ನಯನಾ, ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ರಫೀಕ್, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಆರ್ಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಫಾತಿಮಾ, ಬಿದ್ದಪ್ಪ, ಜಗತ್, ಬಟ್ಟಕಾಳಂಡ ರಾಜ ದಿನೇಶ್, ಚೆಕು, ಅನಿಲ್, ಯುವ ಕಾಂಗ್ರೆಸ್‌ನ ಸದಸ್ಯರು ಇದ್ದರು.