ಮಡಿಕೇರಿ, ಮೇ.೭: ಪ್ರಸಕ್ತ ಸಾಲಿಗೆ ಕೊಡ್ಲಿಪೇಟೆ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇ.೭೫ ಹಾಗೂ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಶೇ.೨೫ ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ.೧೬ ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ, ಸಮವಸ್ತç, ಶುಚಿ ಸಂಭ್ರಮ ಕಿಟ್, ಲೇಖನ ಸಾಮಾಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು ದೂ.ಸಂ. ೮೧೫೧೯೯೫೨೭೨ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ ದಿವಾಕರ ಅವರು ತಿಳಿಸಿದ್ದಾರೆ.