ವೀರಾಜಪೇಟೆ, ಮೇ.೮: ವೀರಾಜಪೇಟೆ ತಾಲೂಕಿನ ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್.ಇ.ಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶದೊAದಿಗೆ ರಾಜ್ಯದಲ್ಲಿ ೧೨ನೇ ಸ್ಥಾನ, ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದು, ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆಕಾರ್ಯಕ್ರಮ ಅಕಾಡೆಮಿ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ದಿಯಂಡ ಎಚ್ ಸೂಫಿ ಹಾಜಿ ಅಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮುಂದಿನ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದರ ಮೂಲಕ ಶಿಕ್ಷಣ, ಕಲಿಕೆಯೊಂದಿಗೆ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಂಡು ಸಾಧಿಸುವ ಛಲದೊಂದಿಗೆ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದ್ದು, ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕಲಿಕೆಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದರು. ಗ್ರಾಮೀಣ ಭಾಗದ ಕಡುಬಡ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದು ದಾನಿಗಳು ಹೆಚ್ಚಿನ ಸಹಕಾರ ನೀಡಬೇಕೆಂದು ಹೇಳಿದರು.
ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಅಧ್ಯಕ್ಷ ಸಿಪಿಎಂ ಬಶೀರ್ ಹಾಜಿ ಮಾತನಾಡಿ, ಪ್ರಾಥಮಿಕ ಶಿಕ್ಷಣದಿಂದ ಡಿಗ್ರಿ ಕಾಲೇಜು ಶಿಕ್ಷಣದವರೆಗೆ ಮುನ್ನಡೆಯುತ್ತಿದ್ದು ಶಿಕ್ಷಕರುಗಳ ಪರಿಶ್ರಮದಿಂದ ವಿದ್ಯಾರ್ಥಿಗಳು ಕಲಿಕೆಯ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಮುಂದಾಗಿದ್ದು ಶಿಕ್ಷಣ, ಕ್ರೀಡೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜಿಲ್ಲೆ, ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಭಾನುಮತಿ ಮಾತನಾಡಿ ಎಸ್.ಇ.ಎ ಶಿಕ್ಷಣ ಸಂಸ್ಥೆಯಲ್ಲಿ ಕಲಿಕೆಗೆ ಪೂರಕವಾದ ಉತ್ತಮ ವಾತಾವರಣವಿದ್ದು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟzಲ್ಲಿ ಸಾಧನೆ ಮಾಡಿದ್ದಾರೆ. ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಕರುಗಳು ಮುಂದಾಗಿದ್ದು ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು.
ಸಮಾಜ ಸೇವಕ ಕುಂಡAಡ ರಫೀಕ್ ಮಾತನಾಡಿ, ಉನ್ನತ ಶಿಕ್ಷಣ ಕಲಿತ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲೂ ಉದ್ಯೋಗಾವಕಾಶ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ ಅವರು ಸಂಸ್ಥೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿಶೇಷ ಸಾಧನೆ ಮಾಡಿದ ಗೋಣಿಕೊಪ್ಪಲುವಿನ ಅರುಣ್ ಕುಮಾರ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಪ್ರಮುಖರಾದ ಎಡಪಾಲ ಬಸಿರ್ ಹಾಜಿ, ಮಹಮ್ಮದ್ ಮಣಿ ಮಾಸ್ಟರ್, ಅಬ್ದುಲ್ ರೆಹಮಾನ್ ಹಾಜಿ, ಮೊಹಮ್ಮದ್ ಅಲಿ, ಸಲ್ಮಾನ್ ಹಾಜಿ, ಇರ್ಫಾನ್, ಅಹಮದ್ ಸಮೀರ್, ಅಬ್ದುಲ್ ಖಾದರ್ ಹಾಜಿ, ರಿಯಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.