ಗೋಣಿಕೊಪ್ಪಲು, ಮೇ ೮: ವೀರಾಜಪೇಟೆ, ಪೊನ್ನಂಪೇಟೆ ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದಿAದ ತಾ. ೯ ರಿಂದ (ಇಂದಿನಿAದ) ೨ ದಿನಗಳ ಕಾಲ ಗೋಣಿಕೊಪ್ಪಲುವಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ ಲೀಗ್ ಮಾದರಿಯಲ್ಲಿ ಮಡಿವಾಳ ಜನಾಂಗದ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಹತ್ತು ತಂಡಗಳು ಭಾಗವಹಿಸಲಿವೆ.

ಮಡಿವಾಳ ಸಂಘದ ಅಧ್ಯಕ್ಷ ಡಿ.ಪಿ. ರಾಜೇಶ್ ಅಧ್ಯಕ್ಷತೆಯಲ್ಲಿ ಕ್ರೀಡೊತ್ಸವ ಜರುಗಲಿದೆ.

ಕ್ರೀಡೊತ್ಸವದ ಅಂಗವಾಗಿ ಮಹಿಳೆಯರಿಗೆ ಹಗ್ಗಜಗ್ಗಾಟ, ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಯಲಿದೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ೨೦ ಸಾವಿರ ನಗದು ಆಕರ್ಷಕ ಪಾರಿತೋಷಕ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ೧೦ ಸಾವಿರ ನಗದು ಹಾಗೂ ಪಾರಿತೋಷಕಗಳನ್ನು ನೀಡಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ಜನಾಂಗದ ನಿವೃತ್ತ ಸೈನಿಕರಿಗೆ ಕಲೆ, ಸಾಹಿತ್ಯ, ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ್ ಕಾಮತ್, ಗೋಣಿಕೊಪ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಮಡಿವಾಳ ಸಮಾಜದ ರಾಜ್ಯಾಧ್ಯಕ್ಷ ಸಿ. ನಂಜಪ್ಪ, ಮೂಡುಬಿದಿರೆಯ ಕಾರಂಜಿ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.