ಮಡಿಕೇರಿ, ಮೇ ೮: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲೂಕು ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ, ವೀರಾಜಪೇಟೆ ಮಂಡಲ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಆಲೆಮಾಡ ಸುದೀಪ್, ಪ್ರಮುಖರಾದ ಚಿರಿಯಪಂಡ ರಾಜಾ ನಂಜಪ್ಪ, ಚಿಂಡಮಾಡ ರಕ್ಷಿತ್, ಮೂಕಳೇರ ಲಕ್ಷö್ಮಣ್, ಮೂಕಳೇರ ರಮೇಶ್, ಅಡ್ಡಂಡ ಪ್ರಕಾಶ್, ಎಸ್‌ಸಿ ಮೋರ್ಚಾದ ರಮೇಶ್, ಮಧು, ಕೊಟ್ಟಂಗಡ ಸಜನ್ ಪೂವಣ್ಣ, ರೇಖಾ ಶ್ರೀಧರ್, ಗಾಂಡAಗಡ ಕೌಶಿಕ್ ದೇವಯ್ಯ, ಕೋಳೇರ ರಾಜ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.