ಸೋಮವಾರಪೇಟೆ, ಮೇ ೯: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿ ರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ ಧರಣಿ ೯ ನೇ ದಿನಕ್ಕೆ ಕಾಲಿಟ್ಟಿದೆ. ೯ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಧರಣಿ ನಿರತರ ಬೇಡಿಕೆ ಆಲಿಸುವ ಭರವಸೆ ಸಿಕ್ಕಿದೆ. ಸೂರಿಲ್ಲದ ಬಡವರಿಗೆ ಉಚಿತ ನಿವೇಶನ ನೀಡುವುದಕ್ಕೆ ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕು. ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸದಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಗಳಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲಾಗುವುದು ಎಂದು ಮೊಣ್ಣಪ್ಪ ಎಚ್ಚರಿಸಿದರು.