ಮಡಿಕೇರಿ, ಮೇ ೯: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿAದ ನೀಡುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವರದಿಗಾರರಾದ ನವೀನ್ ಡಿಸೋಜ ಹಾಗೂ ಹಿರಿಕರ ರವಿ ಆಯ್ಕೆಯಾಗಿದ್ದಾರೆ. ಉದ್ಯಮಿ ಶಿವಶಂಕರ ನೆಕಾಜೆ ನೀಡುವ ದತ್ತಿನಿಧಿ ಪ್ರಶಸ್ತಿಗೆ ಆಂದೋಲನ ದಿನಪತ್ರಿಕೆಯ ಕೊಡಗು ಜಿಲ್ಲಾ ವರದಿಗಾರ ನವೀನ್ ಡಿಸೋಜ ಆಯ್ಕೆಯಾಗಿದ್ದರೆ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ನೀಡುವ ದತ್ತಿನಿಧಿ ಪ್ರಶಸ್ತಿಗೆ ಸೋಮವಾರಪೇಟೆ ವಿಜಯವಾಣಿ ವರದಿಗಾರ ಹಿರಿಕರ ರವಿ ಆಯ್ಕೆಯಾಗಿದ್ದಾರೆ.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾ. ೧೬ ರಂದು ಕಾಸರಗೋಡುವಿನಲ್ಲಿ ನಡೆಯಲಿರುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಇಬ್ಬರು ಸೇರಿದಂತೆ ರಾಜ್ಯದ ವಿವಿಧೆಡೆಯ ಒಟ್ಟು ೧೮ ಮಂದಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.