ವೀರಾಜಪೇಟೆ, ಮೇ ೧೦: ವೀರಾಜಪೇಟೆ ಸಮೀಪದ ಗುಂಡಿಕೆರೆಯಲ್ಲಿ ನಡೆದ ಉರೂಸ್ ಸಮಾರಂಭದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದರು. ಉರೂಸ್‌ನ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಶುಭ ಕೋರಿದ ಶಾಸಕರು, ಪ್ರತಿಯೊಂದು ಕಾರ್ಯಕ್ರಮವು ಅದರದ್ದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ನಾಡಿನಲ್ಲಿ ನಡೆಯುವ ಉರೂಸ್ ಕಾರ್ಯಕ್ರಮವು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಪಕ್ಷದ ಮುಖಂಡರುಗಳಾದ ಮಾಳೇಟಿರ ಪ್ರಶಾಂತ್, ಮೊಯಿದು, ಗುಂಡಿಕೆರೆ ತಕ್ಕ ಮುಖ್ಯಸ್ಥರು, ಮುಸ್ಲಿಂ ಜಮಾಅತ್ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.