ೆÆÃಮವಾರಪೇಟೆ, ಮೇ ೧೦: ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವತೆ ಬಂಡಿಯಮ್ಮ ದೇವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ಮತ್ತು ಶುಕ್ರವಾರ ನೆರವೇರಿತು.

ದೇವತಾ ವಿಗ್ರಹ ಪ್ರತಿಷ್ಠಾಪನೆಯ ಬಳಿಕ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಸದಾಶಿವ ಸ್ವಾಮೀಜಿ, ವಿಜ್ಞಾನದೊಂದಿಗೆ ಧರ್ಮ ಮೇಳೈಸಿರುವ ಹಿಂದೂ ಧರ್ಮವು ಜಗತ್ತಿನ ಶ್ರೇಷ್ಠ ಧರ್ಮವಾಗಿದೆ ಎಂದು ಹೇಳಿದರು.

ಮನುಷ್ಯನು ತನ್ನ ಅಂತರAಗವನ್ನು ಶುಚಿಯಾಗಿ ಇಟ್ಟುಕೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಪಡೆಯಬೇಕು. ಸಜ್ಜನರ ಸಂಘ ಹಾಗೂ ಸದ್ವಿಚಾರಗಳಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಿದೆ. ಪೋಷಕರಲ್ಲಿ ಉತ್ತಮ ಸಂಸ್ಕಾರಗಳಿದ್ದರೆ ಅದು ಮಕ್ಕಳಲ್ಲೂ ಸಹಜವಾಗಿ ಬೆಳೆಯುತ್ತದೆ. ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರವೂ ಅತಿ ಮುಖ್ಯ ಎಂದು ತಿಳಿಸಿದರು.

ದೇವಾಲಯ ನಿರ್ಮಾಣಕ್ಕಾಗಿ ಶಾಸಕ ಡಾ. ಮಂತರ್ ಗೌಡ ಅವರು ವಿಶೇಷ ಆಸಕ್ತಿ ವಹಿಸಿ ಒಂದು ಲಕ್ಷ ರೂ.ಗಳ ಅನುದಾನ ನೀಡಿರುವುದನ್ನು ದೇವಾಲಯ ಸಮಿತಿ ಅಧ್ಯಕ್ಷ ಸಿದ್ದಪ್ಪ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಸಮಿತಿ ಉಪಾಧ್ಯಕ್ಷ ಧರ್ಮಪ್ಪ, ಕಾರ್ಯದರ್ಶಿ ಮೋಹನ್ ಮತ್ತು ನಿರ್ದೇಶಕರುಗಳು ಇದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.