ತಾ. ೧೩ ರಿಂದ ೧೮ ರವರೆಗೆ ಕೈಂಕರ್ಯ

ನಾಪೋಕ್ಲು, ಮೇ ೧೦: ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ತಾ. ೧೩ ರಿಂದ ೧೮ರವರೆಗೆ ನಡೆಯಲಿದೆ.

ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ ೧೩ ರಂದು ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ಅಂಕುರಾರ್ಪಣೆ, ವಾಸ್ತು ರಾಕ್ಷೋಘ್ನ ಹೋಮ ನೆರವೇರಲಿದೆ. ತಾ ೧೪ರಂದು ಗಣಪತಿ ಹೋಮ ಅಂಕುರ ಪೂಜೆ, ಬಿಂಬಶುದ್ಧಿ ಕಳಶ ಪೂಜೆ ಕಲಶಾಭಿಷೇಕ ಪ್ರಾಯಶ್ಚಿತ ಹೋಮಗಳು ನೆರವೇರಲಿವೆ. ರಾತ್ರಿ ಅಂಕುರ ಪೂಜೆ ಹಾಗೂ ದುರ್ಗಾ ನಮಸ್ಕಾರ ಪೂಜೆಗಳು ನೆರವೇರಲಿವೆ. ತಾ. ೧೫ರಂದು ಬೆಳಿಗ್ಗೆ ೭ ಗಂಟೆಗೆ ಗಣಪತಿ ಹೋಮ ಅಂಕುರ ಪೂಜೆ, ಶಾಂತಿ ಹೋಮಗಳು ಹೋಮ ಕಲಶಾಭಿಷೇಕ ನಡೆಯಲಿದ್ದು ಮಧ್ಯಾಹ್ನ ಪೂಜೆ ಹಾಗೂ ರಾತ್ರಿ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ನಡೆಯಲಿವೆ.

ತಾ. ೧೬ರಂದು ಬೆಳಿಗ್ಗೆ ೭ರಿಂದ ಗಣಪತಿ ಹೋಮ ಅಂಕುರ ಪೂಜೆ ತತ್ವ ಹೋಮ ತತ್ವ ಕಲಶ ಪೂಜೆ ತತ್ವ ಕಲಶಾಭಿಷೇಕ ನಡೆಯಲಿದೆ. ತಾ. ೧೭ರಂದು ಬೆಳಿಗ್ಗೆ ೭ ಗಂಟೆಯಿAದ ಗಣಪತಿ ಹೋಮ, ಅಂಕುರ ಪೂಜೆ, ಕಲಶ ಪೂ,ಜೆ ಕುಂಭೇಶ ಕರ್ಕರಿ ಕಲಶ ಪೂಜೆ ಅಧಿವಾಸ ಹೋಮಗಳು ನಡೆಯಲಿವೆ. ತಾ. ೧೮ರಂದು ಬೆಳಿಗ್ಗೆ ೮ ಗಂಟೆಯಿAದ ರೋಹಿಣಿ ನಕ್ಷತ್ರ ಮಿಥುನ ಲಗ್ನದಲ್ಲಿ ಅಷ್ಟ ಬಂಧ ಲೇಪನ ಪರಿಕಲಶಾಭಿಷೇಕ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಪೂಜೆ ಪ್ರಸಾದ ವಿತರಣೆ ಮಂತ್ರಾಕ್ಷತೆ ಜರುಗಲಿದೆ ಎಂದು ಪಾಡಿ ಇಗ್ಗುತ್ತಪ್ಪ ದೇವಾಲಯದ ತಕ್ಕ ಮುಖ್ಯಸ್ಥರು ಹಾಗೂ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ಮತ್ತು ಪಾಡಿ ಇಗ್ಗುತ್ತಪ್ಪ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಗೂ ಆಡಳಿತ ಮಂಡಳಿ ಅವರು ತಿಳಿಸಿದ್ದಾರೆ.