ಕೂಡಿಗೆ, ಮೇ.೧೦: ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ.
ಗ್ರಾಮದ ಪುರಿಯಯ್ಯ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದ ಪರಿಣಾಮವಾಗಿ ಮನೆಯ ಮೇಲ್ಛಾವಣಿ ಮತ್ತು ಗೋಡೆಗೆ ಹಾನಿಯಾಗಿದೆ. ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ ಕಿರಣ್ ಜಿ.ಗೌರಯ್ಯ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಸೇರಿದಂತೆ ಸಿಬ್ಬಂದಿ ವರ್ಗದವರು ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.