ಕುಶಾಲನಗರ, ಮೇ ೧೦: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿ ಪಡೆದ ಮಂಡೇಪAಡ ಬೋಸ್ ಮೊಣ್ಣಪ್ಪ ಅವರನ್ನು ಕುಶಾಲನಗರ ಹಿರಿಯ ನಾಗರಿಕರ ವೇದಿಕೆಯ ಆಶ್ರಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ ನಿವೃತ್ತ ಸರಕಾರಿ ನೌಕರರ ಸಂಘದ ಕಟ್ಟಡ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷರಾದ ಎಂ.ಎಚ್ ನಜೀರ್ ಅಹ್ಮದ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಕಾರ್ಯದರ್ಶಿ ಕೆಂಚಪ್ಪ, ಖಜಾಂಚಿ ವಿ.ಆರ್ ಹೆಗ್ಡೆ, ಸಲಹೆಗಾರರಾದ ದಿವಾಕರ್, ಜಂಟಿ ಕಾರ್ಯದರ್ಶಿ ರಾಜಪ್ಪ, ಕೆ.ಎ ನಾಣಯ್ಯ ಮತ್ತು ಆಡಳಿತ ಮಂಡಳಿ ಸದಸ್ಯರು ಇದ್ದರು.