ಮಡಿಕೇರಿ, ಮೇ ೧೧: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ ೨೦೨೬-೨೭ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ಸಿಇಟಿ/ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಸಿಇಟಿ, ನೀಟ್ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ’’ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‌ಸೈಟ್ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ. ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ ೪ (ಪಾಸ್ ಪೋರ್ಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ. ೧೦೦ ರ ಛಾಪಕಾಗದದಲ್ಲಿ Iಟಿಜemಟಿiಣಥಿ ಃoಟಿಜ ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂ.ಸಂ.೦೮೨೭೨-೨೦೧೪೪೯ ನ್ನು ಸಂಪರ್ಕಿಸಬಹುದು. “ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ ೩೦ ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.