ಕೂಡಿಗೆ, ಮೇ ೧೧: ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿ ಕಳೆದ ೧೫ ವರ್ಷಗಳ ಹಿಂದೆ ಗುರುತಿಸಲ್ಪಟ್ಟ ಜಾಗದಲ್ಲಿ ಕುಶಾಲನಗರಕ್ಕೆ ಸೇರಿದ ೬ ಗ್ರಾಮ ಪಂಚಾಯಿತಿಗಳು ಹಾಗೂ ಕೈಗಾರಿಕಾ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ೬೬/೧೧ ಕೆ.ವಿ ವಿದ್ಯುತ್ ಸಬ್ ಪವರ್ ಸ್ಟೇಷನ್ ಘಟಕವನ್ನು ಆರಂಭ ಮಾಡುವ ಹಿನ್ನೆಲೆಯಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಟೆಂಡರ್ ಪ್ರಕ್ರಿಯೆಯು ನಡೆದಿದ್ದು ಇದೀಗ ಕಾಮಗಾರಿ ಭರದಿಂದ ಸಾಗುತ್ತಿದೆ.

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ ವತಿಯಿಂದ ಈಗಾಗಲೇ ಕಾಯ್ದಿರಿಸಿದ ಜಾಗದಲ್ಲಿ ನಿಗಮದ ನಿಯಮಾನುಸಾರ ರೂ.೬ ಕೋಟಿ ವೆಚ್ಚದ ಟೆಂಡರ್ ಪ್ರಕ್ರಿಯೆ ನಡೆದು ಕಾಮಗಾರಿಯ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿ ನಡೆಯುತ್ತಿದೆ.

ಘಟಕದ ಆರಂಭದಿAದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಗಾರಿಕಾ ಘಟಕಗಳಿಗೆ ಸೇರಿದಂತೆ ಕೂಡಿಗೆ, ಕೂಡುಮಂಗಳೂರು, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿ ಮತ್ತು ಅವುಗಳಿಗೆ ಸೇರಿದ ೪೦ ಉಪ ಗ್ರಾಮಗಳಿಗೆ ಅನುಕೂಲವಾಗಲಿದೆ. - ಕೆ.ಕೆ. ನಾಗರಾಜಶೆಟ್ಟಿ.