ಚೆಟ್ಟಳ್ಳಿ, ಮೇ ೧೧: ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಕುಶಾಲನಗರ ಸಮೀಪದ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರಕ್ಕೆ ತಮ್ಮ ಕುಟುಂಬದೊAದಿಗೆ ಖಾಸಗಿ ಭೇಟಿ ನೀಡಿದರು.

ಈ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಸ್ಥಳದಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.