ಕುಶಾಲನಗರ, ಮೇ ೧೧: ಕುಶಾಲನಗರ ಬೈಚನಹಳ್ಳಿಯ ಶ್ರೀ ಆದಿಶಕ್ತಿ ಅಂತರಘಟ್ಟೆ ಅಮ್ಮ ದೇವಾಲಯದ ೧೧ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಭಕ್ತಿ ಭಾವದಿಂದ ನಡೆಯಿತು.

ಬೆಳಗ್ಗೆ ಗಣಪತಿ ಹೋಮ, ದುರ್ಗಾ ಹೋಮ, ನವ ಶಕ್ತಿ ಅಭಿಷೇಕ, ಪಂಚಾಮೃತ ಅಭಿಷೇಕ ನಡೆದು ಮಹಾಮಂಗಳಾರತಿ ತೀರ್ಥಪ್ರಸಾದ ನಂತರ ಅನ್ನಸಂತರ್ಪಣೆ ನಡೆಯಿತು. ಕೃಷ್ಣಮೂರ್ತಿ ಭಟ್ ನೇತೃತ್ವದ ಅರ್ಚಕರ ತಂಡದಿAದ ಪೂಜಾ ವಿಧಿ ವಿಧಾನಗಳು ಜರುಗಿದವು.

ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲದೊAದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು.

ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಶುಭ ಕೋರಿದರು. ಗ್ರಾಮ ಸೇರಿದಂತೆ ಸುತ್ತಮುತ್ತಲ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭ ದೇವಾಲಯ ಸೇವಾ ಸಮಿತಿ ಅಧ್ಯಕ್ಷರಾದ ವಿ ಗಿರೀಶ್, ಗೌರವಾಧ್ಯಕ್ಷರಾದ ಗೋವಿಂದರಾಜು ಉಪಾಧ್ಯಕ್ಷರಾದ ಬಿ ಎಸ್ ಗಣೇಶ್ ಕಾರ್ಯದರ್ಶಿ ಬಿ ಎಂ ಜಗದೀಶ್, ಖಜಾಂಚಿ ಜಗದೀಶ್ ದೇವಾಲಯ ಅರ್ಚಕರಾದ ಸ್ವಾಮಿ ಇದ್ದರು.