ಮಡಿಕೇರಿ, ಮೇ ೧೧: ೧ ಕೊಡಗು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಕಥೆಗಾರ ಅಬ್ದುಲ್ ರಶೀದ್ ಅವರ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ನಿವಾಸದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷÀ ಎಂ.ಪಿ ಕೇಶವ ಕಾಮತ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರು, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಆದ ಎ ಲೋಕೇಶ್ ಕುಮಾರ್, ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್. ಸಬಾಸ್ಟಿನ್, ಸಮ್ಮೇಳನದ ಆಹಾರ ಸಮಿತಿ ಅಧ್ಯಕ್ಷ ಹರೀಶ್ ಗುಡ್ಡೆಮನೆ ಸಾಂಪ್ರದಾಯಿಕವಾಗಿ ಸಮ್ಮೇಳನದ ಅಧ್ಯಕ್ಷರನ್ನು ಗೌರವಿಸುವ ಮೂಲಕ ಸಮ್ಮೇಳನಕ್ಕೆ ಆಹ್ವಾನ ನೀಡಿದರು. ಈ ಸಂದರ್ಭ ಅಬ್ದುಲ್ ರಶೀದ್ ಅವರ ಪತ್ನಿ ಮೋಳಿ ವರ್ಗಿಸ್ ಇದ್ದರು.