ಮಡಿಕೇರಿ ಮೇ.೧೧: ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ. ಸಹನಾ ಎಸ್. ಹಾದಿಮನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

೨೦೧೪ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ಸಹನಾ ಎಸ್. ಹಾದಿಮನಿ ಅವರು ಈ ಹಿಂದೆ ೬ ವರ್ಷಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅದಕ್ಕೂ ಮೊದಲು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.