ಕೂಡಿಗೆ, ಮೇ ೧೨: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದಲ್ಲಿ ನೂತನವಾಗಿ ಬಸ್ ತಂಗುದಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ರೂ. ೫ ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೇರಿಸಿದರು.

ನಂತರ ಮಾತನಾಡಿ, ಗ್ರಾಮಾಂತರ ಪ್ರದೇಶಗಳ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಸಂಬAಧಿಸಿದAತೆ ಎಲ್ಲಾ ಕಾರ್ಯಗಳನ್ನು ಕೈಗೊಂಡು ಅಭಿವೃದ್ಧಿಪಡಿಸಲಾಗುವುದು, ಸರಕಾರದ ಕ್ರಿಯಾ ಯೋಜನೆಯ ಅನುಗುಣವಾಗಿ ಹಂತ ಹಂತವಾಗಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭ ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಸಮಾಜ ಸೇವಕ ಹಕ್ಕೆ ಮೋಹನ್, ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಮಾದವ, ಹುಲುಸೆ ವೆಂಕಟೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಪಿ. ಹಮೀದ್ ಸೇರಿದಂತೆ ಗ್ರಾಮದ ಪ್ರಮುಖರು ಹಾಜರಿದ್ದರು.