ಕುಶಾಲನಗರ, ಮೇ ೧೨: ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ- ೨೬ ರ ಅಂಗವಾಗಿ ಕುಶಾಲನಗರದಲ್ಲಿ ನಡೆದ ಕೊಡಗು ಜಿಲ್ಲಾ ಪ್ರಶಿಕ್ಷಣ ವರ್ಗದ ಎರಡು ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಯಾವುದೇ ಪಕ್ಷಗಳು ಸರಕಾರ ನಡೆಸುವುದು ಮುಖ್ಯವಲ್ಲ, ಸರಕಾರ ನಡೆಸುವ ಸಂದರ್ಭದಲ್ಲಿ ಪಕ್ಷದ ವಿಚಾರಧಾರೆ ದೇಶದ ಅಭಿವೃದ್ಧಿ ಸಿದ್ದಾಂತಗಳು ಮುಖ್ಯ. ಇಡೀ ವಿಶ್ವದಲ್ಲಿ ಭಾರತ ದೇಶದ ಛಾಪನ್ನು ಮೂಡಿಸಿರುವ ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದರು.

ಶೂನ್ಯದಿಂದ ಆಕಾಶದತ್ತ ಏರಲು ವಿಚಾರ ಸಿದ್ದಾಂತ ನಿಯಮಗಳಲ್ಲಿ ರಾಜಿ ಸಲ್ಲದು ಎಂದ ನಳಿನ್ ಕುಮಾರ್ , ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಪಕ್ಷವಾಗಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ ಸದಸ್ಯರು ಶಾಸಕರುಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಪಡೆದ ಪಕ್ಷವಾಗಿದೆ ಎಂದರು.

ವಿಧಾನಪರಿಷತ್ ಸದಸ್ಯರಾದ ಸಿಟಿ ರವಿ ರಾಜ್ಯ ಸಹ ಸಂಯೋಜಕರಾದ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಎನ್ ವಿ ಪಣೀಶ್, ವಿಭಾಗ ಪ್ರಬಾರಿಗಳಾದ ಬಿ ಬಿ ಭಾರತೀಶ್, ರಾಜ್ಯ ಉಪಾಧ್ಯಕ್ಷರಾದ ಎನ್ ಮಹೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರಾದ ಡಾ ವೈ ಭರತ್ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು ಮಾಜಿ ಸಂಸದ ಪ್ರತಾಪ್ ಸಿಂಹ ಅವರುಗಳು ದೇಶ ಎದುರಿಸುತ್ತಿರುವ ಸವಾಲುಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದರು.

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರಾದ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ದಕ್ಷಿಣ ಕನ್ನಡ - ಮೈಸೂರು ವಿಭಾಗದ ಪ್ರಬಾರಿ ರಾಜೇಶ್, ಸಹ ಪ್ರಬಾರಿ ಲಿಂಗರಾಜ್ ಬಿಜೆಪಿ ಮಾಜಿ ಅಧ್ಯಕ್ಷರಾದ ರಾಬಿನ್ ದೇವಯ್ಯ, ಶಿಬಿರ ಸಂಚಾಲಕರಾದ ಮನು ಮುತ್ತಪ್ಪ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತಿತರರು ಇದ್ದರು.