ಮಡಿಕೇರಿ, ಮೇ ೧೨: ವಿದ್ಯುತ್ ವಿತರಣಾ ೬೬/೧೧ ಕೆ.ವಿ. ಉಪಕೇಂದ್ರ ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ೧೧ ಕೆ.ವಿ. ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗೋಣಿಕೊಪ್ಪ, ಪೊನ್ನಂಪೇಟೆ, ಶ್ರೀಮಂಗಲ, ಬಾಳೆಲೆ, ಸುಳುಗೋಡು, ಕೋಣನಕಟ್ಟೆ, ದೇವನೂರು, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ. ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ತಾ. ೧೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ೬೬/೧೧ ಕೆ.ವಿ. ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ತಾ. ೧೪ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಮಡಿಕೇರಿ ೬೬/೧೧ ಕೆ.ವಿ. ವಿದ್ಯುತ್ ಉಪಕೇಂದ್ರದಿAದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ರಾಜಾಸೀಟ್, ಗದ್ದಿಗೆ, ಕೋಟೆ, ಕುಂಡಮೇಸ್ತಿç, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ. ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.