*ಗೋಣಿಕೊಪ್ಪ, ಮೇ ೧೩: ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು ಪ್ರಬಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಆರ್ ರಾಜೇಶ್ ನೇಮಕವಾಗಿದ್ದಾರೆ.
ಈ ಹಿಂದೆ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಸಿ. ಅಪ್ಪಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆ ಮಾಲ್ದಾರೆ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆರ್ ರಾಜೇಶ್ ಅವರನ್ನು ಪ್ರಬಾರ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ, ಅರುವತ್ತೊಕ್ಲು, ಕಿರುಗೂರು ಪಂಚಾಯಿತಿ ಆಡಳಿತಾಧಿಕಾರಿಯಾಗಿ ಕರ್ತವ್ಯದ ಜವಾಬ್ದಾರಿಯಲ್ಲಿದ್ದಾರೆ. ಇವರು ಈ ಹಿಂದೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.