*ಗೋಣಿಕೊಪ್ಪ, ಮೇ ೧೩: ಕೊಡಗು ಹಿಂದೂ ಮಲಯಾಳಿ ಸಮಾಜದ ಪದಗ್ರಹಣ ಹಾಗು ಪ್ರತಿಭಾ ಪುರಸ್ಕಾರ ತಾ. ೧೭ರಂದು ನಡೆಯಲಿದೆ ಎಂದು ಗೋಣಿಕೊಪ್ಪ ಕೊಡಗು ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ವಿ.ವಿ. ಅರುಣ್ ಕುಮಾರ್ ಮಾಹಿತಿ ನೀಡಿದರು.
ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ ೯:೪೫ ಗಂಟೆಗೆ ಸಮಾಜದ ಅಧ್ಯಕ್ಷ ಕೆ.ಪಿ. ಪ್ರಶಾಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಪೊನ್ನಂಪೇಟೆ ತಾಲೂಕು ಶ್ರೀ ಅಮ್ಮ ಕುಟುಂಬದ ಶಾಂತ ಕುಂಞÂಕಣ್ಣನ್ ಅವರು ಜ್ಯೋತಿ ಬೆಳಗಿಸಲಿದ್ದಾರೆ. ಕೊಡಗು ಹಿಂದೂ ಮಲಯಾಳಿ ಸಮಾಜದ ಜಿಲ್ಲಾ ಸಲಹೆಗಾರ ಟಿ.ಆರ್ ವಾಸುದೇವ್ ಮತ್ತು ಚೆನ್ನಯ್ಯನಕೋಟೆ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಿಕಿ ಕೆ.ಕೆ ಸುಷಾ ಮೋಹನ್, ತಾಲೂಕು ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕಿ ಬಿಂದು ಕೆ.ಆರ್ ಮತ್ತು ಕೊಡಗು ಹಿಂದೂ ಮಲಯಾಳಿ ಸಮಾಜದ ಗೌರವಾಧ್ಯಕ್ಷ ಪಿ.ಎಸ್. ಶರತ್ಕಾಂತ್, ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಗೋಣಿಕೊಪ್ಪ ಶಾಖೆಯ ಅಧ್ಯಕ್ಷ ಕೆ. ವೇಣುಗೋಪಾಲ ಮೆನನ್, ಗೋಣಿಕೊಪ್ಪ ಎಸ್.ಎನ್.ಡಿ.ಪಿ ಅಧ್ಯಕ್ಷ ಪಿ.ಜಿ ರಾಜಶೇಖರ್, ಗೋಣಿಕೊಪ್ಪ ವಿಶ್ವ ಕರ್ಮ ಸಮಾಜದ ಅಧ್ಯಕ್ಷ ಮಣಿಕಂಠ ಉಪಸ್ಥಿತರಿರುತ್ತಾರೆ.
ಇದೇ ಸಂದರ್ಭ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳನ್ನು ಹಾಗೂ ಕ್ರೀಡೆ, ಕಲೆ, ಸಂಸ್ಕöÈತಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು. ಜೊತೆಗೆ ಸಮುದಾಯದವರಿಂದ ಸಾಂಸ್ಕöÈತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.